ಬೆಳಗಾವಿಯಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ನೆರವು: ಇ.ವಿ. ರಮಣ ರೆಡ್ಡಿ
Infrastructure IT IT Park Latest News

ಬೆಳಗಾವಿಯಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ನೆರವು: ಇ.ವಿ. ರಮಣ ರೆಡ್ಡಿ

Belagavi IT infrastructure,belagavi infrastructure,Belagavi IT,belgaum it park,belagavi development,Belagavi IT development,Belagavi EV Raman Reddy,EV Raman Reddy,KDEM summit Belagavi,KDEM ceo summit Belagavi,KDEM Belagavi,KDEM Belgaum

ಬೆಳಗಾವಿಯಲ್ಲಿ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದು, ಐಟಿ ಉದ್ಯಮ ಬೆಳವಣಿಗೆಗೆ ಇದು ಪೂರಕವಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸರಕಾರ ಎಲ್ಲ ಅಗತ್ಯ ವ್ಯವಸ್ಥೆಯನ್ನು ಒದಗಿಸಲಿದೆ ಎಂದು ವಿದ್ಯುನ್ಮಾನ ಮತ್ತು ಐಟಿ, ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಅವರು ಭರವಸೆ ನೀಡಿದರು.

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ) `ಬಿಯಾಂಡ್ ಬೆಂಗಳೂರು’ ಉಪಕ್ರಮದ ಅಂಗವಾಗಿ ಬುಧವಾರ ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ `ಸಿಇಓಗಳ ದುಂಡುಮೇಜಿನ ಶೃಂಗಸಭೆ’ಯಲ್ಲಿ ಅವರು ಮಾತನಾಡಿದರು.

ರಾಜ್ಯದ ವಿವಿಧೆಡೆ ಸಾಕಷ್ಟು ಜಮೀನು‌ ಲಭ್ಯವಿದ್ದು, ಐಟಿ/ಬಿಟಿ ಉದ್ಯಮದ ಬೆಳವಣಿಗೆಗೆ ಸರಕಾರದಿಂದ ಅಗತ್ಯ ಜಮೀನು ಒದಗಿಸಲಾಗುವುದು. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ಭಾಗದಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿ ಗೆ ಪ್ರೋತ್ಸಾಹ ಒದಗಿಸಲಾಗುತ್ತದೆ.

ಕೇಂದ್ರ ಸರಕಾರ ‌ಮಾದರಿಯಲ್ಲಿ ಸಹಾಯ ಹಾಗೂ ಪ್ರೋತ್ಸಾಹ ಧನವನ್ನು ಒದಗಿಸಲಾಗುತ್ತಿದೆ. ಇದನ್ನು ‌ಬಳಸಿಕೊಂಡು ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಐಟಿ ಉದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡರು.

ಧಾರವಾಡದ ಬೇಲೂರ ಪ್ರದೇಶದಲ್ಲಿ ಕ್ಲಸ್ಟರ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ರಮಣ ರೆಡ್ಡಿ ತಿಳಿಸಿದರು.

ಐಟಿ/ಬಿಟಿ ನಿರ್ದೇಶಕರಾದ ಮೀನಾ ನಾಗರಾಜ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಚೇರಮನ್ ನಾಯ್ಡು, ಟಿಸಿಎಸ್ ರಾಜ್ಯ ವಿಭಾಗದ ಮುಖ್ಯಸ್ಥ ಸುನಿಲ್ ದೇಶಪಾಂಡೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಐಟಿ/ಬಿಟಿ ಕ್ಷೇತ್ರದ ಉದ್ಯಮಿಗಳು, ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Leave a Reply