ಕೆನರಾ ಬ್ಯಾಂಕ್ ದೇಶಪಾಂಡೆ ಅರ ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇಂಡಿಯಾ ಲಿಮಿಟೆಡ್ ಸಹಯೋಗದಲ್ಲಿ 30 ದಿನಗಳ ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ.
ತರಬೇತಿ ಅವಧಿಯಲ್ಲಿ ಊಟ ಹಾಗು ವಸತಿ ಉಚಿತವಾಗಿದ್ದು, 18 ರಿಂದ 45 ವರ್ಷ ವಯೋಮಿತಿಯ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಹಾಗೂ ತರಬೇತಿಯ ಅವಶ್ಯಕತೆ, ಪ್ರಸಕ್ತ ಉದ್ಯೋಗದ ವಿವರಗಳನ್ನೊಳಗೊಂಡ ಅರ್ಜಿಯನ್ನು ಜುಲೈ 10 ರ ಒಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಅರ ಸೆಟಿ, ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ವಿಳಾಸಕ್ಕೆ ಸಲ್ಲಿಸಲು ತಿಳಿಸಲಾಗಿದೆ.
ಮೊಬೈಲ್ ಸಂಖ್ಯೆ: 9449782425, 6363429889 ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.