ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದ್ದು, ಸೆಪ್ಟೆಂಬರ್ 3 ಕ್ಕೆ ಚುನಾವಣೆ ನಡೆಯಲಿದೆ. ಈ ಸಂಬಂಧ ಆಗಸ್ಟ್ 16ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನ ಹೊರಡಿಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಗ್ರೀನ್ ಸಿಗ್ನಲ್ ತೋರಿಸಲಾಗಿದ್ದು, ಸೆಪ್ಟಂಬರ್ 3ಕ್ಕೆ ಚುನಾವಣೆ ನಡೆಯಲಿದ್ದು, ಸೆಪ್ಟಂಬರ್ 6ಕ್ಕೆ ಮತ ಎಣಿಕೆ ನಡೆಯಲಿದೆ.
ಬೆಳಗಾವಿ ಮಹಾನಗರ ಪಾಲಿಕೆ – 58 ವಾರ್ಡ್, ಹುಬ್ಬಳ್ಳಿ ಧಾರವಾಡ ಮಹಾನಗರ – 82 ವಾರ್ಡ್ ಮತ್ತು ಕಲಬುರಗಿ ಮಹಾನಗರ ಪಾಲಿಕೆ – 55 ವಾರ್ಡ್
Also read : ಬೆಳಗಾವಿ ಮಹಾನಗರ ಪಾಲಿಕೆ – ವಾರ್ಡ್ವಾರು ಮತದರಾರರ ಕರಡುಪಟ್ಟಿ ಪ್ರಕಟ
- Advertisement -
ಚುನಾವಣಾ ವೇಳಾಪಟ್ಟಿ –
ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ : 16/08/2021
ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ : 21/08/2021
ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ : 24/08/2021
ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ : 26/08/2021
ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 7.00 ಘಂಟೆಯಿಂದ ಸಾಯಂಕಾಲ 5,00 ಘಂಟೆವರೆಗೆ) : 03/09/2021
ಮರು ಮತದಾನ ಅವಶ್ಯಕವಿದ್ದಲ್ಲಿ ದಿನಾಂಕ ಮತ್ತು ದಿನ (ಮತದಾನದ ಸಮಯ ಬೆಳಿಗ್ಗೆ 7.00 ಘಂಟೆಯಿಂದ ಸಾಯಂಕಾಲ 5,00 ಘಂಟೆವರೆಗೆ) : 05/09/2021
ಮತಗಳ ಎಣಿಕೆಯು ಬೆಳಿಗ್ಗೆ 8.00 ಘಂಟೆಯಿಂದ (ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ) : 06/09/2021
ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ : 06/09/2021