ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 2021 ರ ಕುರಿತು 58 ವಾರ್ಡಗಳಿಗೆ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ವೀಕ್ಷಕರನ್ನು ನಿಯೋಜಿಸಿಲಾಗಿದೆ. ಭೂ ಸ್ವಾಧೀನ (ಪು.ವ.ಮತ್ತು ಪುನಿ) ಬೃಹತ್ ನೀರಾವರಿ ಯೋಜನೆಗಳ ವಿಶೇಷ ಜಿಲ್ಲಾಧಿಕಾರಿಗಳಾದ ಗೀತಾ ಕೌಲಗಿ (ಮೊ. ಸಂಖ್ಯೆ-9448933533) ಅವರನ್ನು ವಾರ್ಡ ಸಂಖ್ಯೆ 1 ರಿಂದ 29 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ.
ಅದೇ ರೀತಿ, ಕೃಷಿ ಇಲಾಖೆಯ ಜಾಗೃತ ಕೋಶದ ಜಂಟಿ ನಿರ್ದೇಶಕರಾದ ಜಿಲಾನಿ ಮೊಕಾಶಿ (ಮೊ.ಸಂಖ್ಯೆ – 8277934042) ಅವರನ್ನು ವಾರ್ಡ ಸಂಖ್ಯೆ 30 ರಿಂದ 58 ರವರೆಗೆ ಚುನಾವಣಾ ವೀಕ್ಷಕರನ್ನಾಗಿ ನಿಯೋಜಿಸಿಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also read : ಬೆಳಗಾವಿ ಪಾಲಿಕೆ ಚುನಾವಣೆ: ಚುನಾವಣಾಧಿಕಾರಿ ಕಚೇರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ