ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಗಡಿಭಾಗದಲ್ಲಿರುವ ಕುಗನೊಳ್ಳಿ ಚೆಕ್ ಪೋಸ್ಟ್ ಗೆ ಭಾನುವಾರ(ಆ.29) ಭೇಟಿ ನೀಡಿದ ಅವರು ಅಂತರರಾಜ್ಯ ಪ್ರಯಾಣಿಕರ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ನೆರೆಯ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವ ಪ್ರಯಾಣಿಕರ ಕೋವಿಡ್ ತಪಾಸಣಾ ಆರ್.ಟಿ.-ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಆದ್ದರಿಂದ ಅಂತರರಾಜ್ಯ ಪ್ರಯಾಣಿಕರ ಮೇಲೆ ಚೆಕ್ ಪೋಸ್ಟ್ ನಲ್ಲಿ ನಿಗಾ ವಹಿಸಬೇಕು. ಸರಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ತಪಾಸಣೆ ನಡೆಸಬೇಕು ಎಂದು ಚೆಕ್ ಪೋಸ್ಟ್ ನಲ್ಲಿ ನಿಯೋಜಿತ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗೆ ತಿಳಿಸಿದರು.
Also Read : ವಿಶೇಷ ಸರ್ವೇಕ್ಷಣಾ ಕ್ರಮ : ಕುಗನೊಳ್ಳಿ, ಕಾಗವಾಡ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ, ಎಸ್.ಪಿ. ಭೇಟಿ
- Advertisement -
ಪ್ರಯಾಣಿಕರ ಕೋವಿಡ್ ವರದಿ ತಪಾಸಣೆಗೆ ಸಂಬಂಧಿಸಿದಂತೆ ನಿರ್ವಹಿಸಲಾಗುತ್ತಿರುವ ರಿಜಿಸ್ಟರ್ ಮತ್ತಿತರ ದಾಖಲೆಗಳನ್ನು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪರಿಶೀಲಿಸಿದರು.