ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಉಸ್ತುವಾರಿಗಳನ್ನು ಬಿಜೆಪಿ ನೇಮಿಸಿದ್ದು, ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ರಾಜ್ಯ ಉಸ್ತುವಾರಿಯಾಗಿದ್ದಾರೆ.
ಪಕ್ಷದ ಚುನಾವಣಾ ಉಸ್ತುವಾರಿಗಳಾಗಿ ನೇಮಕವಾಗಿರುವ ತಂಡದಲ್ಲಿ ಆಯಾ ಕ್ಷೇತ್ರಗಳ ಸಂಸದ, ಶಾಸಕರು ಮತ್ತು ಪಕ್ಷದ ಪ್ರಮುಖರು ಇದ್ದಾರೆ.
• ಬೆಳಗಾವಿಗೆ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಸತೀಶ್ ರೆಡ್ಡಿ, ಅಭಯ್ ಪಾಟೀಲ್
• ಹುಬ್ಬಳ್ಳಿ-ಧಾರವಾಡಕ್ಕೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಲಕ್ಷ್ಮಣ ಸವದಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ
- Advertisement -
Also Read : ಬೆಳಗಾವಿ ಪಾಲಿಕೆ ಚುನಾವಣೆ: ಚುನಾವಣಾಧಿಕಾರಿ ಕಚೇರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ
• ಕಲಬುರಗಿಗೆ ಸಚಿವ ಮುರುಗೇಶ್ ನಿರಾಣಿ, ಎಂಎಲ್ಸಿ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮತ್ತು ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ನೇಮಕ ಮಾಡಲಾಗಿದೆ.