ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ತಮ್ಮ ಅಮೂಲ್ಯವಾದ ಮತ ನೀಡಿ ಆಶೀರ್ವಾದ ಮಾಡಿದ ಎಲ್ಲ ಮಹಾನಗರ ಪಾಲಿಕೆ ಮತದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಹಾಗೂ ಎಲ್ಲ ಕಾರ್ಯಕರ್ತರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೊರೊನಾ ಸಂಕಷ್ಟ ,ಪ್ರವಾಹ ಹಾಗೂ ಮಳೆಯಿಂದಾಗಿರುವ ನಷ್ಟದ ಮಧ್ಯೆಯೂ ಕೂಡ ಅಭಿವೃದ್ಧಿ ಪರ ಚಿಂತನೆ ಮಾಡಿರುವ ಸರ್ಕಾರ ನಮ್ಮದು. ನಮ್ಮ ಸರ್ಕಾರದ ಆಡಳಿತವು ಜನಪರ ಮತ್ತು ಅಭಿವೃದ್ಧಿ ಪರ ಎಂಬುದಕ್ಕೆ ಇಂದಿನ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಉಸ್ತುವಾರಿ ವಹಿಸಿದ್ದರು. ನನ್ನ ಮೇಲಿನ ಭರವಸೆ, ಪಕ್ಷದ ನಾಯಕರ ಭರವಸೆ ಮತ್ತು ಪಕ್ಷದ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯಕರ್ತರು, ಶಾಸಕರು, ಸಂಸದರು ಎಲ್ಲರೂ ನಿರಂತರವಾಗಿ ಪ್ರಯತ್ನಿಸಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ.
- Advertisement -
ದೇಶದಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತಕ್ಕೆ ಇಂದು ಜನ ಮನ್ನಣೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.