2021-22 ನೇ ಸಾಲಿನ ಕರ್ನಾಟಕ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸರ್ಕಾರದ ಆದೇಶದಂತೆ ದಿನಾಂಕ: 28-03-2022 ರಿಂದ 11-04-2022 ರವರೆಗೆ ನಡೆಸಲು ತೀರ್ಮಾನಿಸಿದೆ,
ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ “ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
ಅಂದರೆ 28-03-2022 ರಿಂದ 11-04-2022 ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ವಿಷಯದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.