ಈ ಬಾರಿಯು ಕರ್ನಾಟಕ ಸರ್ಕಾರ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲು ಹಿಂದೇಟು – ಬೆಂಗಳೂರಿನ ವಿಧಾನಸೌಧದಲ್ಲೇ ಅಧಿವೇಶನ ನಡೆಸಲು ತೀರ್ಮಾನ.
ಮುಂದಿನ ತಿಂಗಳು ಸೆಪ್ಟೆಂಬರ್ ನಲ್ಲಿ ಕೇವಲ 10 ದಿನಗಳ ಅಧಿವೇಶನ ನಡೆಸಲು ಸರ್ಕಾರ ಸಕಲ ಸಿದ್ಧತೆಗಳನ್ನು ಆರಂಭಸಿದೆ. ಬೆಳಗಾವಿಯಲ್ಲಿ ನಡೆಸಲು ಸಾಕಷ್ಟು ಬೇಡಿಕೆಯಿತ್ತಾದರೂ ಕೋವಿಡ್ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನಲ್ಲೇ ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.
2019 ರಲ್ಲಿ ಬೆಳಗಾವಿ ಸೇರಿದಂತೆ ಬಹುತೇಕ ಉತ್ತರ ಕರ್ನಾಟಕವು ಭೀಕರ ಪ್ರವಾಹ ಎದುರಾಗಿತ್ತು ಇದೇ ಕಾರಣಕ್ಕೆ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸುಕ್ತವಲ್ಲವೆಂದು ಬೆಂಗಳೂರಿನಲ್ಲೇ ನಡೆಸಿತು. 2020 ರಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಿದ ಸರ್ಕಾರ, ಈ ಬಾರಿಯೂ ಅದೇ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
Also read : ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
- Advertisement -
ಹಲವು ರಾಜಕಾರಣಿಗಳಿಂದ ಮನವಿ – ಹಲವಾರು ರಾಜಕಾರಣಿಗಳು ಬೆಳಗಾವಿಯಲ್ಲಿ ಈ ಬಾರಿ ಅಧಿವೇಶನ ನಡೆಸಲು ಒತ್ತಾಯ ಹೇರಿದ್ದರು. ಅದರಲ್ಲಿ ಬಿಜೆಪಿ ಪಕ್ಷದವರೇ ಆದ ಹಿರಿಯ ರಾಜಕಾರಣಿ ಪ್ರಭಾಕರ ಕೋರೆ ಅವರೂ ಕೂಡ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು, ಸರ್ಕಾರ ಕನಿಷ್ಠ 30 ದಿನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕೆಂದು ಆಗ್ರಹಿಸಿದ್ದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತು ಮುಖ್ಯ ಸಚೇತಕ ಮಹಂತೇಶ್ ಕವಟಗಿಮಠ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿ ವಿಧಾನ ಮಂಡಲ ಕಲಾಪ ನಡೆಸುವಂತೆ ಒತ್ತಾಯಿಸಿದ್ದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ಸರ್ಕಾರಕ್ಕೆ ಒತ್ತಾಯ ಮಾಡಿದ್ದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕ ಭಾಗದ ಜನರಿಗೆ ದ್ರೋಹ ಮಾಡ್ತಿದ್ದೀರಾ ಎಂದು ಕಿಡಿಕಾರಿದ ಸಿದ್ದು, ನಮ್ಮ ಆಡಳಿತಾವಧಿಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದ್ದೇವೆ ಎಂದರು. ಬಿಜೆಪಿ ಸರ್ಕಾರದ ಧೋರಣೆ ಖಂಡಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದೇವೆ. ಭಿತ್ತಿ ಪತ್ರ ಪ್ರದರ್ಶನ ಮಾಡುವ ಮೂಲಕ ನಮ್ಮ ಆಕ್ರೋಶ ವ್ಯಕ್ತಪಡಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದರು