ಬೆಳಗಾವಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಪ್ರವಾಹ ಹಾವಳಿ ಹೆಚ್ಚುತ್ತಿರುವ ಕಾರಣ ಜನ-ಜಾನುವಾರಗಳ ರಕ್ಷಣೆಗಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾ ಉಸ್ತವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರದು, ಔಷಧೋಪಚಾರದೊಂದಿಗೆ ಜನರ ಆರೋಗ್ಯ ಹಾಗೂ ಜಾನುವಾರುಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡುವುದು ಹಾಗೂ ರಸ್ತೆ ಸೇತುವೆ ಹಾಳಾಗಿದ್ದರೆ ಕೂಡಲೇ ದುರಸ್ತಿ, ಕೆರೆ ಕಟ್ಟೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ, ಎಲ್ಲಾ ಕೆಲಸಗಳನ್ನೂ ಮುತುವರ್ಜಿಯಿಂದ ಅತ್ಯಂತ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು.
ಈ ನಿಟ್ಟಿನಲ್ಲಿ ಸರಕಾರದ ವಿವಿಧ ಇಲಾಖೆಗಳ ಮೂಲಕ (ಆರೋಗ್ಯ, ಕಂದಾಯ, ಲೋಕೋಪಯೋಗಿ, ಪೊಲೀಸ್) ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡಬೇಕು ಹಾಗೂ ಜನರ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯ ಎಲ್ಲಾ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸೂಚನೆ ನೀಡುವದು ಹಾಗೂ ಕರ್ತವ್ಯಲೋಪ ಮಾಡುವಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಹಾಗೂ ಎಲ್ಲಾ ಕಾರ್ಯಗಳನ್ನು ಅತ್ಯಂತ ಜಾಗೂಕತೆಯಿಂದ ನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.