ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು

*ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳೆ, ರಸ್ತೆ, ಸೇತುವೆ ಇತರ ಮೂಲಸೌಕರ್ಯಗಳು ಸೇರಿದಂತೆ ಒಟ್ಟಾರೆ 7800 ಕೋಟಿ ರೂಪಾಯಿ ಹಾನಿಯಾಗಿದೆ.

* 21300 ವಿದ್ಯುತ್ ಕಂಬಗಳು‌‌ ಹಾಗೂ 5300 ಟ್ರಾನ್ಸ್ ಫಾರ್ಮರ್ ನೀರಿನಲ್ಲಿ ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಹಾನಿ‌ ಅಂದಾಜು ಮಾಡಲಾಗುವುದು.
* ಸಮಗ್ರ ಸಮೀಕ್ಷೆ ಬಳಿಕ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.

* 51 ಕಾಳಜಿ 38 ಸಾವಿರ ಜನರಿಗೆ ಆಶ್ರಯ ನೀಡಲಾಗಿದೆ. ಇನ್ನೂ ವಾರದ ಕಾಲ ಅವರಿಗೆ ಆಶ್ರಯ ನೀಡಲು ಸೂಚನೆ.

* ಪರಿಹಾರವನ್ನು ಆರ್.ಟಿ.ಜಿ.ಎಸ್‌. ಮೂಲಕ ಪಾವತಿಗೆ ಸೂಚನೆ ನೀಡಲಾಗಿದೆ.

* ನಾಳೆ ಚಿಕ್ಕೋಡಿ ವಿಭಾಗದಲ್ಲಿ ಹಾನಿ ಪರಿಶೀಲಿಸಿ, ಅಧಿಕಾರಿಗಳ ಸಭೆಯನ್ನು ನಡೆಸಲಾಗುವುದು.

* ಜಿಲ್ಲಾಧಿಕಾರಿ ಖಾತೆಯಲ್ಲಿ 92 ಕೋಟಿ ರೂಪಾಯಿ ಇದೆ. ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

* ರಸ್ತೆ ಮತ್ತಿತರ ಮೂಲಸೌಕರ್ಯಗಳ ತುರ್ತು ದುರಸ್ತಿಗೆ 120 ಕೋಟಿ ಹಣ ಬಿಡುಗಡೆ ಮಾಡಲು ಕೋರಲಾಗಿದೆ.

* ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಜನರು ಮರಣ ಹೊಂದಿದ್ದಾರೆ.

* ಕೇಂದ್ರ ಸರಕಾರ ಕೂಡ ಮಾರ್ಗಸೂಚಿ ಪ್ರಕಾರ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ.

* ಹಾನಿ ವರದಿ ಸಲ್ಲಿಸಿದ ಬಳಿಕ ಕೇಂದ್ರ ಅಧ್ಯಯನ ತಂಡ ಭೇಟಿ‌ ನೀಡಿ ಪರಿಶೀಲಿಸಿದ ಬಳಿಕ ಮತ್ತಷ್ಟು ಹಣ ಬಿಡುಗಡೆ ಮಾಡಲಿದೆ.

* ಪ್ರವಾಹ ಪರಿಹಾರ ವಿತರಣೆಯಲ್ಲಿ ಲೋಪದೋಷ ಎಸಗಿದರೆ ಕೂಡಲೇ ಅಮಾನತು ಮಾಡಬೇಕು. ಅಗತ್ಯಬಿದ್ದರೆ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

* ಹೆಚ್ಚಿನ ಲಸಿಕೆಗಳನ್ನು ಪೂರೈಸಿ ಲಸಿಕಾಕರಣ‌ ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
* ಸಂಭವನೀಯ ಕೋವಿಡ್ 3ನೇ ಅಲೆ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಸಿಇಓ ದರ್ಶನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.

Leave a Reply