ಕನ್ನಡ ಅಭಿವೃದ್ಧಿ ಪ್ರಾಧಿಕಾರವು ೧ ನವೆಂಬರ್ ೨೦೨೦ರಿಂದ ೩೧ ಅಕ್ಟೋಬರ್ ೨೦೨೧ರವರೆಗಿನ ಅವಧಿಯನ್ನು “ಕನ್ನಡ ಕಾಯಕ ವರ್ಷ” ಎಂದು ಈ ಹಿಂದೆ ಘೋಷಿಸಿತ್ತು. ಅದರ ಅಡಿಯಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಉತ್ತೇಜಿಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ.
ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಮಾಡಿದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನುಮದಿನ(ಆಗಸ್ಟ್ ೨೦)ವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ, ರಾಜ್ಯಾದ್ಯಂತ “ಸಾರಿಗೆ ವಲಯದಲ್ಲಿ ಕನ್ನಡ ಜಾಗೃತಿ” ಅಭಿಯಾನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಮ್ಮಿಕೊಂಡಿದೆ. ರಾಜ್ಯದ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಇತರ ಸಾರಿಗೆ ಇಲಾಖೆ/ನಿಗಮಗಳಲ್ಲಿ ಕನ್ನಡ ಭಾಷೆಯ ಬಳಕೆಯನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ.
Also Read : VTU – Kannada learning compulsory for all Engineering students
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶನದಂತೆ, ಬೆಳಗಾವಿ ಜಿಲ್ಲೆ ಹಾಗೂ ಮಹಾನಗರಪಾಲಿಕೆಯ ಕನ್ನಡ ಜಾಗೃತಿ ಸಮಿತಿ ಸದಸ್ಯರು ನಿನ್ನೆ, ಬೆಳಗಾವಿ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಮೊದಲಾದ ಸಾರಿಗೆ ಇಲಾಖೆಗಳಿಗೆ ಭೇಟಿ ನೀಡಿ, “ಸಾರಿಗೆ ವಲಯದಲ್ಲಿ ಕನ್ನಡ ಬಳಕೆ ಅಭಿಯಾನ” ಹಕ್ಕೊತ್ತಾಯವನ್ನು ಮಂಡಿಸಿದರು.
- Advertisement -
ಡಾ.ಅರವಿಂದ ಕುಲಕರ್ಣಿ, ಜ್ಯೋತಿ ಬದಾಮಿ, ದೀಪಿಕಾ ಚಾಟೆ, ರಾಮಪ್ಪ ಕಟ್ಟಿ ಮೊದಲಾದ ಸದಸ್ಯರು ಪಾಲ್ಗೊಂಡಿದ್ದರು.