2021-22 ನೇ ಸಾಲಿನ ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜು.7 ರಂದು ನಡೆಯಬೇಕಾಗಿದ್ದ ಕೆ.ಡಿ.ಪಿ ಸಭೆಯನ್ನು ಜು.8 ಕ್ಕೆ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಬೆಳಗಾವಿ ಯ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್ ನಲ್ಲಿ ಗುರುವಾರ (ಜು.8)ಮೊದಲನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಲಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.