Sunday, October 24, 2021
HomeUpdatesCOVID-19ಅನ್ ಲಾಕ್ 3 ರಲ್ಲಿ ಯಾವುದಕ್ಕೆಲ್ಲ ಸಡಿಲಿಕೆ ? ಇಲ್ಲಿದೆ ಮಾಹಿತಿ

ಅನ್ ಲಾಕ್ 3 ರಲ್ಲಿ ಯಾವುದಕ್ಕೆಲ್ಲ ಸಡಿಲಿಕೆ ? ಇಲ್ಲಿದೆ ಮಾಹಿತಿ

ಮೂರನೇ ಹಂತದ ಅನ್ಲಾಕ್ ವೇಳೆ ಚಿತ್ರಮಂದಿರ ತೆರೆಯಲು ಯಾವುದೇ ಅವಕಾಶ ನೀಡಿಲ್ಲ. ಸೋಮವಾರ ಬೆಳಗ್ಗೆ 5ಗಂಟೆಯಿಂದ ಜೂ 19ರವರೆಗೆ ಈ ನಿಯಮಗಳು ಜಾರಿಯಲ್ಲಿರಲಿದೆ.

ಯಾವುದೆಲ್ಲಾ ಸಡಿಲಿಕೆ

1. ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

2. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

3. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.

4. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.

5. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

6. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

7. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.

8. ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.

9. ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

10. ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.

11. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.

12. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.

13. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.

14. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.

ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಈಗ ಜಾರಿಯಲ್ಲಿರುವ ಮಾರ್ಗಸೂಚಿ ಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯ ವಾಗಿ ನಿಲ್ಲಿಸಲಾಗುವುದು. ಒಂದು ವೇಳೆ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ,ಸೋಂಕು ಕಡಿಮೆ ಮಾಡಲು ಸಹಕಾರಿಸಬೇಕು. ಈ ನಿಯಮ ಗಳನ್ನೇ ಮತ್ತೆ ಜೂನ್ 21 ರ ನಂತರ ವೂ ಮುಂದುವರಿಸಲಾಗುವುದು ಎಂದರು

RELATED ARTICLES
- Advertisment -