ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಎಂ.ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಬೆಳಗಾವಿಯಲ್ಲಿ ರವಿವಾರ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ, ಅವರನ್ನು ಪಕ್ಷದಿಂದ ಉಚ್ಚಟಿಸುವಂತೆ ಮನವಿ ಸಲ್ಲಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧ ಉತ್ತರ ಕರ್ನಾಟಕದ ಶಕ್ತಿ ಕೇಂದ್ರ, ಇದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕೆನ್ನುವುದು ಉತ್ತರ ಕರ್ನಾಟಕದ ಜನತೆಯ ಆಶಯವಾಗಿದೆ.
ಕರವೇ ಯಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮನವಿ :
ಬಿಜೆಪಿ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗಾಗಿ ರಾಜ್ಯಮಟ್ಟದ ಕಚೇರಿಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಮಠಾಧೀಶರ ಎದುರು ಪ್ರಮಾಣ ಮಾಡಿದ್ದರು.
- Advertisement -
ಆದರೆ ಬಿಜೆಪಿ ವಕ್ತಾರ ಎಂ ಮಹೇಶ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ.ಸುವರ್ಣ ವಿಧಾನಸೌಧಕ್ಕೆ ಕಚೇರಿಗಳನ್ನು ಸ್ಥಳಾಂತರ ಮಾಡಿದ್ರೆ ಈ ಭಾಗದ ಅಭಿವೃದ್ಧಿ ಆಗುತ್ತೆ ಎನ್ನುವದು ತಪ್ಪು ಎಂದು ಹೇಳಿಕೆ ನೀಡುವ ಮೂಲಕ ಉತ್ತರ ಕರ್ನಾಟಕದ ಜನತೆಯ ಆಶೋತ್ತರಗಳಿಗೆ ಅವಮಾನಿಸಿದ್ದಾರೆ.
- Advertisement -
ಅವರ ಹೇಳಿಕೆಯಿಂದ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ಸುವರ್ಣವಿಧಾನ ಸೌಧದ ಅಸ್ತಿತ್ವಕ್ಕೆ ಧಕ್ಕೆಯಾಗಿದೆ.ಈ ಭಾಗದ ಶಕ್ತಿ ಕೇಂದ್ರದ ಘನತೆ ಗೌರವ ಹಾಳಾಗಿದ್ದು ,ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ಎಂ ಮಹೇಶ್ ಅವರನ್ನು ಕೂಡಲೇ ಬಿಜೆಪಿಯಿಂದ ಉಚ್ಛಾಟಿಸಿ,ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ನಿರ್ಧಾರ ಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು.
ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ತಾವು,ಕನಿಷ್ಠ ಮೂರು ತಿಂಗಳಿಗೊಮ್ಮೆ ಸುವರ್ಣ ವಿಧಾನಸೌಧದಲ್ಲಿ ಸಚಿವ ಸಂಪುಟದ ಸಭೆ ನಡೆಸುವಂತೆ,ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಕೋರುತ್ತೇವೆ.