ರಾಜ್ಯದ ಎಲ್ಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ 2 ದಿನದ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಗ್ರಾಮ ಪಂಚಾಯತ್ ನ ವಿವಿಧ ಯೋಜನೆಗಳ ಅಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಬೆಳಗಾವಿ ಜಿಲ್ಲೆಯ ಕಾಕತಿ ಹೊನಗಾ ಗ್ರಾಮಗಳಲ್ಲಿ ಕೆರೆ ಅಭಿವೃದ್ಧಿ ವೀಕ್ಷಿಸಿದರು. ಬಳಿಕ, ಭೂತರಾಮನಹಟ್ಟಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಭೇಟಿ ನೀಡಿ, ನರೇಗಾ ಯೋಜನೆಯಡಿಯಲ್ಲಿ ಕೈಗೊಂಡ ಕೆರೆ ನಿರ್ಮಾಣದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷ, ಮೃಗಾಲಯದ ವ್ಯವಸ್ಥಾಪಕರಾದ ರಾಕೇಶ್ ಅರ್ಜುನವಾಡ, ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
Also Read : Belagavi zoo unveils New logo – Here is what it looks like