ರಾಜ್ಯದ ಎಲ್ಲ ಸಾರಿಗೆ ಘಟಕಗಳಲ್ಲಿ ಪೆಟ್ರೋಲ್ ಬಂಕ್ ತೆರೆಯಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಅಥಣಿಯಲ್ಲಿ ಮಾತನಾಡಿದ ಸಚಿವ ಸವದಿ, ರಾಜ್ಯದ ಎಲ್ಲ ಸಾರಿಗೆ ಘಟಕಗಳಲ್ಲಿ ಪೆಟ್ರೋಲ್ ಬಂಕ್ ತೆರೆಯಲು ಉದ್ದೇಶಿಸಲಾಗಿದ್ದು, ಸರ್ವೇ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬಂಕ್ ತೆರೆಯುವುದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ. ವಿದ್ಯಾವಂತ ಯುವಕ, ಯುವತಿಯರಿಗೆ ಅನುಕೂಲವಾಗಲಿದೆ. ಜತೆಗೆ ಕಡಿಮೆ ದರದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದರು.
ಸಾರಿಗೆ ಸಾಕಷ್ಟು ನಷ್ಟದಲ್ಲಿದ್ದು, ನಷ್ಟ ತುಂಬಲು ಮತ್ತು ಆದಾಯ ಹೆಚ್ಚಿಸಲು ಪೆಟ್ರೋಲ್ ಬಂಕ್ ಗಳನ್ನ ತೆರೆಯಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.
- Advertisement -
ಸಾರಿಗೆಯ ಪೆಟ್ರೋಲ್ ಬಂಕ್ ಗಳಲ್ಲಿ ಅಂಗವಿಕಲರಿಗೂ ಅವಕಾಶ ನೀಡಲಿದೆ ಎಂದು ತಿಳಿಸಿದರು.