ಇಂದು ಬೆಳಗಾವಿಯ ಸಂಸದರಾದ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರು ನವದೆಹಲಿಗೆ ತೆರಳುವ ಸಂದರ್ಭದಲ್ಲಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು
ಭೇಟಿಯಲ್ಲಿ ಮುಖ್ಯಮಂತ್ರಿಗಳ ಮುಂದೆ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಬೆಳಗಾವಿ ಕಿತ್ತೂರು ಧಾರವಾಡ ರೈಲು ಮಾರ್ಗಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಮನವಿ ಮಾಡಿದರು.ಈ ಮಾರ್ಗದಿಂದ ಭಾಗದ ಜನರಿಗೆ ಸಾಕಷ್ಟು ಅನುಕೂಲ ಆಗಲಿದ್ದು ಶೈಕ್ಷಣಿಕ ಹಾಗೂ ವ್ಯವಹಾರಿಕ ದೃಷ್ಟಿಯಿಂದ ಅಭಿವೃದ್ಧಿ ಕಾಣಲಿದೆ ಎಂದು ತಿಳಿಸಿದ್ದಾರೆ.
ಹಾಗೂ ನಗರದ ನಾನಾವಾಡಿ – ಸಾವಗಾಂವ ರಸ್ತೆಯ ಆರಂಭಕ್ಕೆ ಬೆಳಗಾವಿ ಜಿಲ್ಲಾ ಆಡಳಿತಕ್ಕೆ ನಿರ್ದೇಶನ ನೀಡಿ, ಸುಧಾರಣಾ ಕಾಮಗಾರಿಯನ್ನು ಕೈಗೊಳ್ಳುವಾಗ ರಕ್ಷಣಾ ಇಲಾಖೆಯ ಸಮನಾದ ರಸ್ತೆಯನ್ನು ವರ್ಗಾಯಿಸುವಂತೆ, ಅಲ್ಲದೆ ಪ್ರವಾಹದ ಸಂದರ್ಭದಲ್ಲಿ ಹಾಳಾದ ಕೆಲವು ರಸ್ತೆಗಳ ಸುಧಾರಣೆಗೂ ತುರ್ತು ಅನುಮೋದನೆ ಕೋರಿದರು.
ಮಂಗಳ ಅಂಗಡಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಕೆಲಸಗಳಿಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.
- Advertisement -
ಬೆಳಗಾವಿಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ಷೇತ್ರದ ಹಿತದೃಷ್ಟಿಯಿಂದ ಜನಪರ ಕೆಲಸಗಳನ್ನು ಶೀಘ್ರವಾಗಿ ಕಾರ್ಯಗತಗೊಳಿಸಲಾಗುತ್ತಿದೆ ಎಂದು ಮಂಗಳ ಅಂಗಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.