Sunday, October 24, 2021
HomeFloodಲಕ್ಷ್ಮೀ ಹೆಬ್ಬಾಳಕರ ನೆರೆಹಾವಳಿ ಪ್ರದೇಶಕ್ಕೆ ಬೇಟಿ

ಲಕ್ಷ್ಮೀ ಹೆಬ್ಬಾಳಕರ ನೆರೆಹಾವಳಿ ಪ್ರದೇಶಕ್ಕೆ ಬೇಟಿ

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಶನಿವಾರ ಬೆಳಗಾವಿ ಜಿಲ್ಲೆಯ ನೆರೆಹಾವಳಿ ಪ್ರದೇಶಕ್ಕೆ ಭೇಟಿ ನೀಡಿದರು.

ಬೆಳಗಾವಿ ಜಿಲ್ಲೆಯ ಸಂಕೇಶ್ವರ ಬಳಿಯ ಬೆಳಗಾವಿ ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ನಂಬರ್ ನಾಲ್ಕು ಕ್ಕೆ ಅವರು ಬೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಎನ್ ಏಚ್ 4 ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ವಾಹನಗಳಿಗೆ, ಪ್ರಯಾಣಿಕರಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ತೀವ್ರ ತೊಂದರೆಯಾಗಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಾರ್ವಜನಿಕರ ಸಹಾಯಕ್ಕೆ ಧಾವಿಸಿದ್ದು, ಜನರಿಗೆ ಊಟ, ನೀರು, ಮೆಡಿಸಿನ್ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ದೋಣಿಗಳ ಮೂಲಕ ಸಾಗಿಸುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುವ ಎನ್ ಡಿ ಆರ್ ಎಫ್ ತಂಡದವರನ್ನು ಭೇಟಿಮಾಡಿ ಅವರ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಅಭಿನಂದಿಸಿ, ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಶಾಸಕರಾದ ಮಹಾಂತೇಶ ಕೌಜಲಗಿ, ವಿನಯ ನಾವಲಗಟ್ಟಿ, ಪಕ್ಷದ ಕಾರ್ಯಕರ್ತರು ಎನ್ ಡಿ ಆರ್ ಎಫ್ ತಂಡದವರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -