ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ – ಸಿಎಂ ಬೊಮ್ಮಾಯಿ ಭರವಸೆ

ಮುಂಬೈ-ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಆದ್ದರಿಂದ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರಕಟಿಸಿದರು.

ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಯ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕಿತ್ತೂರು ಉತ್ಸವ-2021 ಕ್ಕೆ ಶನಿವಾರ (ಅ.23) ಚಾಲನೆ ನೀಡಿ ಅವರು ಮಾತನಾಡಿದರು.

ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು-ಕರ್ನಾಟಕ ಎಂದು ಘೋಷಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರು ಜನರ ಕರತಾಡನ ಮಧ್ಯೆ ಪ್ರಕಟಿಸಿದರು.

Leave a Reply