ಬೆಳಗಾವಿ ಆಟೋನಗರದಲ್ಲಿ ಒಂದು ಕಡೆ ಹಿಂಡಾಲ್ಕೊ ಮತ್ತು ಇನ್ನೊಂದೆಡೆ ರಕ್ಷಣಾ ಇಲಾಖೆಯ ಜಾಗೆ ಇರುವುದರಿಂದ ಆಟೋನಗರ ಕೈಗಾರಿಕಾ ಪ್ರದೇಶ ಮತ್ತು ರಾಷ್ಟ್ರೀಯ ಹೆದ್ದಾರಿ ನಡುವೆ ಸಂಪರ್ಕ ರಸ್ತೆ ಇಲ್ಲದಿರುವುದರಿಂದ ಕಾರ್ಮಿಕರಿಗೆ ತೀವ್ರ ಅನಾನುಕೂಲ ಆಗುತ್ತಿದೆ. ಆದ್ದರಿಂದ ತಕ್ಷಣವೇ ಸಂಪರ್ಕ ರಸ್ತೆ ಮತ್ತು ಬೀದಿದೀಪ ವ್ಯವಸ್ಥೆ ಒದಗಿಸಬೇಕು ಎಂದು ಆಟೋನಗರದ ಉದ್ಯಮಿಗಳ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ಹೆದ್ದಾರಿ-ಆಟೋನಗರ ನಡುವೆ ಸಂಪರ್ಕ ರಸ್ತೆ ನಿರ್ಮಿಸಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಆಟೋನಗರದಲ್ಲಿ ಟ್ರಕ್ ಟರ್ಮಿನಲ್ ಜಾಗೆಯಲ್ಲಿ ಕೆಲವು ಸರಕಾರಿ ಕಚೇರಿಗಳನ್ನು ಸ್ಥಾಪಿಸಲು ಮಾತ್ರ ಒದಗಿಸುವಂತೆ ಸರಕಾರದ ಆದೇಶವಾಗಿದೆ. ಆದ್ದರಿಂದ ಆ ಜಾಗೆಯನ್ನು ಬೇರೆ ಉದ್ದೇಶಕ್ಕೆ ಒದಗಿಸುವುದು ಸಾಧ್ಯವಾಗುವುದಿಲ್ಲ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.
2007ರಲ್ಲಿ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ಕೆ.ಜೆ.ಪಿ. ಆಗಿಲ್ಲ. ಇದರಿಂದ ಕೈಗಾರಿಕೋದ್ಯಮಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಚಿವರ ಗಮನಸೆಳೆದರು.
ಈ ಬಗ್ಗೆ ಜಿಲ್ಲಾಧಿಕಾರಿ ಹಂತದಲ್ಲಿ ಸೂಕ್ತ ಕ್ರಮಕ್ಕೆ ಸಲಹೆ ನೀಡಲಾಗುವುದು ಎಂದರು.
- Advertisement -
ಕೈಗಾರಿಕಾಭಿವೃದ್ಧಿ ಆಯುಕ್ತರು ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾದ ಗುಂಜನ್ ಕೃಷ್ಣ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ (ಎಂಎಸ್ಎಂಇ ಮತ್ತು ಪಿಪಿ) ಹೆಚ್.ಎಂ.ಶ್ರೀನಿವಾಸ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಎನ್.ಶಿವಶಂಕರ್ ಮತ್ತಿತರರು ಲೋಕ ಅದಾಲತ್ ನಲ್ಲಿ ಉಪಸ್ಥಿತರಿದ್ದರು