ಎಂ. ಜಿ. ಹಿರೇಮಠ, ಭಾ.ಆ.ಸೇ., ಜಿಲ್ಲಾ ದಂಡಾಧಿಕಾರಿಗಳು, ಬೆಳಗಾವಿ ಜಿಲ್ಲೆ, ದಿನಾಂಕ: 19.07.2021 ರಂದು ಮತ್ತು ದಿನಾಂಕ: 22.07.2021 ರಂದು ಬೆಳಿಗ್ಗೆ 10.15 ಗಂಟೆಯಿಂದ 01.45 ಗಂಟೆಯವರೆಗೆ ಹಾಗೂ ಮದ್ಯಾಹ್ನ 02.15 ಗಂಟೆಯಿಂದ 05.30 ಗಂಟೆಯವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜರುಗಲಿರುವ ಪ್ರಯುಕ್ತ ಸಿ.ಆರ್.ಪಿ.ಸಿ.1973 ಕಲಂ 144 ರನ್ವಯ ನನ್ನಲ್ಲಿರುವ ಪ್ರದತ್ತವಾದ ಅಧಿಕಾರದ ಮೇರೆಗೆ ದಿನಾಂಕ: 19.07.2021 ಹಾಗೂ 22.07.2021 ಗಳಂದು ಎಸ್.ಎಸ್.ಎಲ್.ಸಿ ಪರೀಕ್ಷಾ ಸಮಯದಲ್ಲಿ ಈ ಆದೇಶದೊಂದಿಗೆ ಲಗತ್ತಿಸಲಾದ ಅನುಬಂಧದಲ್ಲಿರುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀ. ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ, ಈ ಕೆಳಗಿನ ಚಟುವಟಿಕೆಗಳನ್ನು ಪ್ರತಿಬಂಧಿಸಿ ಆಜ್ಞೆ ಹೊರಡಿಸಿರುತ್ತಾರೆ.
1. ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಿ ತಿರುಗಾಡುವುದನ್ನು,
2. ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಾಯ ಮಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಹತ್ತಿರ ಬರುವುದನ್ನು,
3. ಸಾರ್ವಜನಿಕ ಸಭೆ, ಮೆರವಣಿಗೆ ಮಾಡುವುದನ್ನು (ಶವ ಸಂಸ್ಕಾರ ಮತ್ತು ಮದುವೆ ಮೆರವಣಿಗೆಗಳನ್ನು ಹೊರತುಪಡಿಸಿ), 4. ಆಯುಧ, ಮಾರಕಾಸ್ತ್ರ, ಸ್ಫೋಟಕ ವಸ್ತುಗಳನ್ನು ತೆಗೆದುಕೊಂಡು ತಿರುಗಾಡುವುದನ್ನು,
- Advertisement -
5. ಯಾವುದೇ ರೀತಿಯ ಫಟಾಕಿ/ಸಿಡಿಮದ್ದು ಸಿಡಿಸುವದನ್ನು,
- Advertisement -
6. ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದನ್ನು,
7. ಸದರೀ ಪರೀಕ್ಷಾ ಕೇಂದ್ರಗಳ 200ಮೀ. ಒಳಗಿನ ಝರಾಕ್ಸ್ ಅಂಗಡಿಗಳನ್ನು ಬಂದ ಇಡತಕ್ಕದ್ದು, 8. ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಿದೆ.
ಈ ವಿಷಯವಾಗಿ ಮುಂದಿನ ಸೂಕ್ತ ಕ್ರಮವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ, ಬೆಳಗಾವಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು, ಬೆಳಗಾವಿ ಇವರು ಕೈಗೊಳ್ಳುವದು ಎಂದು ತಿಳಿಸಿದ್ದಾರೆ.