ಹುಕ್ಕೇರಿ ತಾಲೂಕಿನ 5 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 32 ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಹುಕ್ಕೇರಿಯ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸೆಪ್ಟೆಂಬರ್ 4 , 2020 ರಂದು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಆಯ್ಕೆ ಸಮಿತಿ ಸಭೆಯಲ್ಲಿ ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದ್ದು, ಅಂಗನವಾಡಿ ಕೇಂದ್ರಗಳಾದ ಕೋಣನಕೇರಿ-54 ಪೂಜಾ ನಾಯಿಕ, ಗೋಟೂರು-364 ರೇಣುಕಾ ಕೆಂಚಪ್ಪಾ ನಾಯಿಕ, ಗೋಟೂರು-25 ಸವಿತಾ ಶಂಕರ ಮಗದುಮ್ಮ, ದಡ್ಡಿ-71 ಮಂಗಳಾ ಬಡಿಗೇರ, ಶಿರಢಾಣ-981, ಶ್ರೀದೇವಿ ದುಂಡಪ್ಪಾ ಕೆಂಬಾಳೆ ಕಾರ್ಯಕರ್ತೆಯರ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ.
ಅದೇ ರೀತಿ 32 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೂಡ ಪ್ರಕಟಿಸಲಾಗಿದೆ.
- Advertisement -
ಸದರಿ ಆಯ್ಕೆ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜುಲೈ.20 ಸಂಜೆ 5.30 ಗಂಟೆಯ ಒಳಗಾಗಿ ಲಿಖಿತವಾಗಿ ಅಗತ್ಯ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಹಶೀಲ್ದಾರ ಕಚೇರಿಯ ಸಭಾಭವನ ಹುಕ್ಕೇರಿ ಇಲ್ಲಿಗೆ ಸಲ್ಲಿಸಲು ತಿಳಿಸಲಾಗಿದೆ.
ಅವಧಿ ಮೀರಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹುಕ್ಕೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***